ಅಮಿತ್ ಶಾ ಆಗಮನದಿಂದ `ಕಿತ್ತೂರು ಕರ್ನಾಟಕ'ಕ್ಕೆ ಮತ್ತಷ್ಟು ಶಕ್ತಿ ಬರಲಿದೆ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಧಾರವಾಡ, ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ್ದು, ಕಿತ್ತೂರು ಕರ್ನಾಟಕಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಇಂದು ಅಮಿತ್ ಶಾ ಅವರು ಕುಂದಗೋಳದಲ್ಲಿ ವಿಜಯಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆ, ಹೀಗಾಗಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಮಿತ್ ಶಾ ಭೇಟಿಯಿಂದ ಕಿತ್ತೂರು ಕರ್ನಾಟಕಕ್ಕೆ ಮತ್ತಷ್ಟು ಶಕ್ತಿ ಬರಲಿದೆ. ಮಂಡ್ಯಕ್ಕೆ ಬಂದಿದ್ದರು. ಈಗ ಕಿತ್ತೂರು ಕರ್ನಾಟಕಕ್ಕೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು.