ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಶಿಶುವನ್ನು ಕೊಂದು ಹಾಕಿದ ನಾಯಿಗಳು

ಜೈಪುರ: ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿ ನಾಯಿಯೊಂದು ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಸೋಮವಾರ ತಡರಾತ್ರಿ ಎರಡು ನಾಯಿಗಳು ಆಸ್ಪತ್ರೆಯ ಟಿಬಿ ವಾರ್ಡ್ನೊಳಗೆ ಹೋದವು ಮತ್ತು ಅವುಗಳಲ್ಲಿ ಒಂದು ಶಿಶುವಿನೊಂದಿಗೆ ಹಿಂದಿರುಗಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸ್ಎಚ್ಒ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಸಿಲಿಕೋಸಿಸ್ ಚಿಕಿತ್ಸೆಗಾಗಿ ಮಗುವಿನ ತಂದೆ ಮಹೇಂದ್ರ ಮೀನಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ತನ್ನ ಮೂವರು ಮಕ್ಕಳೊಂದಿಗೆ ರೋಗಿಯನ್ನು ಉಪಚರಿಸುತ್ತಿದ್ದ ಮಗುವಿನ ತಾಯಿ ರೇಖಾ ನಿದ್ರೆಗೆ ಜಾರಿದ ವೇಳೆಯಲ್ಲಿ ಈ ಘಟನೆ ನಡೆದಿದೆ ಅಂತ ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಆಸ್ಪತ್ರೆಯ ಸಿಬ್ಬಂದಿ ಕೂಡ ವಾರ್ಡ್ನಲ್ಲಿ ಇರಲಿಲ್ಲ ಎಂದು ಅವರು ಹೇಳಿದ್ದು, ವೈದ್ಯಕೀಯ ಮಂಡಳಿಯಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆಯ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.