ಇಂದಿನಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ ಡಿ.ಕೆ ಶಿವಕುಮಾರ್

ಕೋಲಾರ: ಇಂದಿನಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಿಸಿದೆ. ಪಕ್ಷದ ನಾಯಕರು ಎರಡು ತಂಡಗಳಲ್ಲಿ ಪ್ರವಾಸ ಆರಂಭಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಪ್ರತ್ಯೇಕ ಬಸ್ ಪ್ರವಾಸ ಕೈಗೊಂಡಿದ್ದು,ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಾಯಕರ ತಂಡ ಉತ್ತರ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದು, ದಕ್ಷಿಣ ಜಿಲ್ಲೆಗಳಲ್ಲಿ ಡಿ.ಕೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಯಾತ್ರೆಗೆ ಚಾಲನೆ ನೀಡಿದ್ದಾರೆ. ಯಾತ್ರೆ ಆರಂಭಕ್ಕೆ ಮೊದಲು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಮಹಾಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.ಇನ್ನು ಮುಳಬಾಗಿಲು ಪುರಾತನ ಹೈದಾರಾಲಿ ದರ್ಗಾಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಡಿಕೆ ಶಿವಕುಮಾರ್ ದರ್ಗಾಗೆ ಅರ್ಪಿಸಲು ಫುಲ್ ಹಾರ್ ಹಾಗೂ ಗಲಫ್ ಅನ್ನು ತೆಲೆಯ ಮೇಲೆ ಹೊತ್ತೊಯ್ದರು.