ಇನ್ನೊಂದು ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ - ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ

ಇನ್ನೊಂದು ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ - ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ( JDS Candidate ) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಹಾಸನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಹೇಳಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ಎರಡನೇ ಹಂತದ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಬಿಡುಗಡೆ. ಪಟ್ಟಿಯಲ್ಲಿ ಯಾವುದೇ ಗೊಂದವಿಲ್ಲ. ದೇವೇಗೌಡರು, ಇಬ್ರಾಹಿಂ ಜೊತೆಗೆ ಚರ್ಚಿಸಲಾಗುತ್ತದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ( Congress, BJP Party ) ಮೊದಲ ಪಟ್ಟಿ ಬಿಡುಗಡೆಗೆ ಮುನ್ನವೇ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತೆದ ಎಂದರು.

ಜೆಡಿಎಸ್ ಪಕ್ಷದ ( JDS Party ) ಎರಡನೇ ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು ಎಂಬುದಾಗಿಯೂ ಘೋಷಣೆ ಮಾಡಲಾಗುತ್ತದೆ. ಕಾಶ್ಯಂಪುರ್ ಅವರ ನೇತೃತ್ವದಲ್ಲಿ ರಚಿಸಿರುವಂತ ಸಮಿತಿಯ ವರದಿಯ ನಂತ್ರ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.

ನಿನ್ನೆಯ ಬಜೆಟ್ ಜಾತ್ರೆ ಮುಗಿದ ಮೇಲೆ, ಉಳಿದಿರುವ ವಸ್ತುಗಳನ್ನು ಮಾರಾಟ ಮಾಡಲು ರಿಯಾಯಿತಿ ದರವನ್ನು ಘೋಷಣೆ ಮಾಡಿದಂತೆ ಅಷ್ಟೇ. ಅದರ ಹೊರತಾಗಿ ಈ ಬಜೆಟ್ ನಲ್ಲಿ ಯಾವುದೇ ಹೊಸದು ಇಲ್ಲ ಎಂಬುದಾಗಿ ಹೇಳಿದರು.