ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವಿಲ್ಲ - ಶಾಸಕ ಡಾ.ಸಿಎನ್ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು: ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ' ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, 'ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನವಿದೆ. ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ಸಿನಿಮಾದ ಭಾಗವಾಗುತ್ತಿಲ್ಲ' ಎಂದು ಅವರು ಹೇಳಿದ್ದಾರೆ.
ಅಂದಹಾಗೇ ಉರಿಗೌಡ, ನಂಜೇಗೌಡರ ಬಗ್ಗೆ ಸಿನಿಮಾ ಮಾಡುವುದಕ್ಕೆ ಮುನಿರತ್ನ ಹೆಸರು ನೊಂದಾಯಿಸಿದ್ದಾರೆ. ಚಲನಚಿತ್ರ ಅಕಾಡೆಮಿಯಿಂದಲೂ ಚಿತ್ರದ ಟೈಟಲ್ ಗೆ ಅನುಮತಿ ನೀಡಲಾಗಿದೆ. ಈ ಚಿತ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಿತ್ರಕತೆ ಬರೆಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ನನ್ನ ಪಾತ್ರವೇ ಇಲ್ಲ ಎಂಬುದಾಗಿ ಹೇಳುವ ಮೂಲಕ, ಆರಂಭದಲ್ಲೇ ಚಿತ್ರಕ್ಕೆ ವಿಘ್ನ ಎದುರಾದಂತೆ ಆಗಿದೆ.