ಒಂದೇ ದಿನದಲ್ಲಿ ಮತ್ತೆ 140 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ಕೊಂಚ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 140 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,30,735 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ನಿನ್ನೆ 39,496 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,28,44,815 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 88,445 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.