ಗೃಹ ಸಚಿವ 'ಆರಗ ಜ್ಞಾನೇಂದ್ರ' ನಿವಾಸದ ಮುಂದೆ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದ ಮುಂದೆ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ನಡೆದಿದೆ.
ಚಾಕುವಿನಿಂದ ಕೈ ಕುಯಿದುಕೊಂಡು ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಗೃಹ ಸಚಿವರ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಜೆಸಿ ನಗರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.