ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಹೆಚ್ಚಿದ ಒತ್ತಡ

ಮೈಸೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಸಿದ್ದರಾಮಯ್ಯಗೆ ಒತ್ತಡ ಹಾಕಿದ್ದಾರೆ.
ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲ್ಲ. ಈ ಹಿಂದೆ ನನ್ನನ್ನು ಗೆಲ್ಲಿಸಿದ್ದೀರಿ, ಅದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಆದ್ರೆ ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ.