ತುಟ್ಟಿ ಭತ್ಯೆ' ಹೆಚ್ಚಳದ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ DA ಯನ್ನು ಬಿಡುಗಡೆ ಮಾಡಬೇಕಾದಲ್ಲಿ ಕೇಂದ್ರ ಸರ್ಕಾರದ ಆದೇಶವಾದ ನಂತರ ಆ ಪ್ರತಿಯೊಂದಿಗೆ ರಾಜ್ಯ ಸರ್ಕಾರಕ್ಕೆ ಸಂಘದಿಂದ ಮನವಿಯನ್ನು ಸಲ್ಲಿಸಿ DA ಪಡೆಯುವುದು ನಿಯಮವಾಗಿರುತ್ತದೆ.
ಹಾಗಾಗಿ ಕೇಂದ್ರ ಸರ್ಕಾರದ ಆದೇಶ ಬಂದ ನಂತರ ನಮ್ಮ ರಾಜ್ಯದಲ್ಲೂ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರ ಸಂಘದಿಂದ ಮನವಿಯನ್ನ ಸಲ್ಲಿಸಿ ಬಾಕಿ ಇರುವ DA ಯನ್ನು ಕೊಡಿಸಲಾಗುವುದು. ಚುನಾವಣೆಗೂ DA ಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ಸಂಘವು ಸ್ಪಷ್ಟೀಕರಿಸಿದೆ ಎಂದು ತಿಳಿಸಿದ್ದಾರೆ.