ತೆಲಂಗಾಣ; ಉದ್ಘಾಟನೆಗೂ ಮುನ್ನ ನೂತನ ಸಚಿವಾಲಯ ಕಟ್ಟಡಕ್ಕೆ ಆವರಿಸಿದ ಬೆಂಕಿ

ತೆಲಂಗಾಣ; ಉದ್ಘಾಟನೆಗೂ ಮುನ್ನ ನೂತನ ಸಚಿವಾಲಯ ಕಟ್ಟಡಕ್ಕೆ ಆವರಿಸಿದ ಬೆಂಕಿ

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ನಲ್ಲಿರುವ ನೂತನ ಸಚಿವಾಲಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಘಟನೆ ಸುದ್ದಿ ತಿಳಿಯುತ್ತಿದ್ದಂತೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೃಷ್ಟವಶಾತ್‌ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಅನಾಹುತಕ್ಕೆ ನಿಜವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಫೆಬ್ರವರಿ 17 ರಂದು ಈ ಹೊಸ ಸೆಕ್ರೆಟರಿಯೇಟ್ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಉದ್ಘಾಟಿಸಲು ನಿರ್ಧರಿಸಲಾಗಿತ್ತು.