ನಾಡಿದ್ದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ: ಕೆಂಪೇಗೌಡರು ಧರುಸುತ್ತಿದ್ದ ಮಾದರಿಯ ಪೇಟ ಗಿಫ್ಟ್

ಬೆಂಗಳೂರು: ನಾಡಿದ್ದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಅವರು ಅಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.ಮೋದಿಯವರು ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ಅವರಿಗಾಗಿ ಮೈಸೂರಿನ ನಂದನ್ ಅವರು ಸಿದ್ಧಪಡಿಸಿರುವ ಕೆಂಪೇಗೌಡರು ಧರುಸುತ್ತಿದ್ದ ಮಾದರಿಯ ಪೇಟವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಲಾಯಿತು