ನಾವೇನು ಟಿಕೆಟ್‌ ನೀಡುವುದಕ್ಕೂ ಸಿದ್ಧವಿದ್ದೀವಿ; ಬಿಜೆಪಿ ಬಿಟ್ಟು ಹೋದ್ರು: ಬಿ.ಎಸ್‌ ಯಡಿಯೂರಪ್ಪ

ನಾವೇನು ಟಿಕೆಟ್‌ ನೀಡುವುದಕ್ಕೂ ಸಿದ್ಧವಿದ್ದೀವಿ; ಬಿಜೆಪಿ ಬಿಟ್ಟು ಹೋದ್ರು: ಬಿ.ಎಸ್‌ ಯಡಿಯೂರಪ್ಪ

ಬೆಂಗಳೂರು: ಬಾಬುರಾವ್‌ ಚಿಂಚನಸೂರ್‌ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಬಿ.ಎಸ್‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವೇನು ಟಿಕೆಟ್‌ ನೀಡುವುದಕ್ಕೂ ಸಿದ್ಧವಿದ್ದರೂ ಬಾಬುರಾವ್ ಚಿಂಚನಸೂರ್ ಬಿಜೆಪಿ ಬಿಟ್ಟು ಹೋಗಿದ್ದಾರೆ. ಹೀಗಿರುವಾಗ ನಾವೇನು ಮಾಡಲು ಸಾಧ್ಯವಿಲ್ಲ.

ಈ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬುರಾವ್ ಚಿಂಚನಸೂರು ಬಿಜೆಪಿ ಬಿಟ್ಟಿದ್ದಾರೆ. ಏನೂ ಮಾಡಲು ಬರಲ್ಲ. ಮೊನ್ನೆ ತಾನೇ ಗಂಡ ಹೆಂಡತಿ ಬಂದು ಕಾಲು ಹಿಡ್ಕೊಂಡಿದ್ರು. ನಾನು ಎಲ್ಲೂ ಹೋಗಲ್ಲ ಅಂದಿದ್ದರು. ಆದರೆ ಈಗ ಬಿಜೆಪಿ ಬಿಟ್ಟು ಹೋಗಿದ್ದಾರೆ. ಅದರ ಬಗ್ಗೆ ಯಾಕೆ ಚರ್ಚೆಯಾಗುತ್ತಿದೆ.

ಇನ್ನು ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿ, ಆ ಯೋಜನೆಗೆ ಎಲ್ಲಿ ಬೆಲೆ ಇದೆ? ಹಿಂದೆಲ್ಲ ಬೇರೆ ರಾಜ್ಯದಲ್ಲಿ ಯೋಜನೆ ಘೋಷಣೆ ಮಾಡಿದ್ದು ಕಾರ್ಯರೂಪಕ್ಕೆ ಬಂದಿದ್ಯಾ? ಅಭಿವೃದ್ಧಿ ಕಾರ್ಯಕ್ಕೆ ಎಲ್ಲಿ ಹಣ ಉಳಿಯುತ್ತದೆ. ಅವರು ಘೋಷಣೆ ಮಾಡಿದ್ದು ನೋಡಿದರೆ ಉಚಿತ ಯೋಜನೆ ಮತ್ತು ಸರ್ಕಾರಿ ಸಂಬಳ ಕೊಡೋಕೆ ಅಷ್ಟೇ ರಾಜ್ಯದ ಬಜೆಟ್ ಸಾಲುತ್ತದೆ ಎಂದರು.
ರಾಜ್ಯದಲ್ಲಿ ನಿಶ್ಚಿತವಾಗಿ 140 ಸ್ಥಾನ ಗೆದ್ದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹವರ ನಾಯಕತ್ವ ನಮಗಿದೆ. ರಾಹುಲ್ ಗಾಂಧಿ ಇವರಿಗೆ ಸಮ ಆಗಲು ಸಾಧ್ಯವಿಲ್ಲ ಎಂದರು.