ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ : ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಕರ್ನಾಟಕ ಪುರಸಭೆಗಳ (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) (ವಿಶೇಷ) ನಿಯಮಗಳ ರೀತ್ಯಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ತಾತ್ಕಾಲಿಕ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಅಂತಿಮವಾಗಿ ಅಯ್ಕೆ ಮಾಡುವ ಕುರಿತು ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಅಥವಾ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಮಾರ್ಚ್ 3ರ ಒಳಗೆ ಸಲ್ಲಿಸಬಹುದು. ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಕೈಬಿಡಲಾಗುವುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.