ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ `ಮುಖ್ಯಮಂತ್ರಿ ಹುದ್ದೆಯ ಘನತೆ' ಉಳಿಸಲಿ : ಸಿದ್ದರಾಮಯ್ಯ ಆಗ್ರಹ

ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ `ಮುಖ್ಯಮಂತ್ರಿ ಹುದ್ದೆಯ ಘನತೆ' ಉಳಿಸಲಿ : ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರ ಅಡಿಯಿಂದ ಮುಡಿವರೆಗೆ 40% ಕಮಿಷನ್‌ನಲ್ಲಿ ಮುಳುಗಿದೆ ಎಂಬ ನಮ್ಮ ಆರೋಪಗಳಿಗೆ ದಾಖಲೆ ಕೇಳುತ್ತಿದ್ದ ಮುಖ್ಯಮಂತ್ರಿಗಳಿಗೆ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಲಂಚ ಪಡೆಯುವಾಗ ಹಣದ ಸಮೇತ ಸಿಕ್ಕಿಬಿದ್ದ ದಾಖಲೆ ಸಾಕಲ್ಲವೇ? ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆ, ಗೌರವವನ್ನಾದರೂ ಉಳಿಸಲಿ ಎಂದು ಹೇಳಿದ್ದಾರೆ.