ಮತ್ತೆ ಮಾ.17ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಮತ್ತೆ ಮಾ.17ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲೇ, ಇಂದು ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹವಾ ಜೋರಾಗಿದೆ. ಈ ಬೆನ್ನಲ್ಲೇ ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಮಾರ್ಚ್ 17ರಂದು ಆಗಮಿಸಲಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, 1 ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಮಾರ್ಚ್ 17ರಂದು ಇಟ್ಟುಕೊಳ್ಳಲಾಗಿದೆ. ಅಂದು ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಅಂದೇ ಚಿಕ್ಕಬಳ್ಳಾಪುರದಲ್ಲಿ 22 ಸಾವಿರ ಉಚಿತ ನಿವೇಶದ ಹಕ್ಕು ಪತ್ರಗಳನ್ನು ಕೂಡ ವಿತರಣೆ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಉದ್ಘಾಟನೆ ಕೂಡ ಮಾಡಲಿದ್ದಾರೆ. ಮಾರ್ಚ್ 17ರಂದು ಮೂರು ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದರು.

ಇಂದು ಶಿವಮೊಗ್ಗ ಮತ್ತು ಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ, ಬೆಳಗಾವಿಗೆ ತೆರಳಿರುವಂತ ಅವರು, ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಈ ಬಳಿಕ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಉದ್ಘಾಟನೆಯನ್ನು ಮಾಡಲಿದ್ದಾರೆ.