ಮಾರ್ಚ್ 3ರಂದು ಬೆಂಗಳೂರಿಗೆ ಅಮಿತ್ ಶಾ; ನಗರದಲ್ಲಿ ಪೊಲೀಸ್ ಅಧಿಕಾರಿಗಳಿಂದ ಸರಣಿ ಸಭೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಿಟಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಭರಾಟೆ ಜೋರಾಗಿದೆ.
ನಾನಾ ಸರ್ಕಸ್ಗಳನ್ನು ಮಾಡುತ್ತಿವೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ಕಸರತ್ತು ಮಾಡುತ್ತಿದೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಅಧಿಕಾರಿಗಳಿಂದ ಸರಣಿ ಸಭೆ ನಡೆಯುತ್ತಿದೆ. ಅಮಿತ್ ಶಾ ಬೆಂಗಳೂರಿಗೆ ಭೇಟಿ ಹಾಗೂ ಚುನಾವಣೆ ತಯಾರಿ ಸಂಬಂಧ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸರಣಿ ಸಭೆ ನಡೆಯುತ್ತಿದೆ. ಇದೀಗ ಡಿಜೆ ಮತ್ತು ಐಜಿಪಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಯುತ್ತಿದೆ.
ಮಾರ್ಚ್ 3ರಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಆಗಮಿಸಲಿದ್ದು, ಇದೇ ವೇಳೆ ಕಮಿಷನರ್ ಕಚೇರಿಯ ಕಮಾಂಡ್ ಸೆಂಟರ್ ಗೆ ಭೇಟಿ ನೀಡಲಿದ್ದಾರೆ. ನಂತರ ಸೇಫ್ ಸಿಟಿ ಪ್ರಾಜೆಕ್ಟ್ ಚಾಲನೆ ನೀಡಲಿದ್ದಾರೆ. ಈ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.