ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಝಣ ಝಣ ಕಾಂಚಾಣದ ಸದ್ದು; ಸಮಾವೇಶಕ್ಕೆ ಜನ ಕರೆತಂದ ಚಾಲಕರಿಗೆ ಹಣ ಹಂಚಿಕೆ

ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬಿಗ್ ಫೈಟ್ ಶುರುವಾಗಿದೆ. ಗಿಫ್ಟ್ ಪಾಲಿಟಿಕ್ಸ್ ಆಯ್ತು ಇದೀಗ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಝಣ ಝಣ ಕಾಂಚಾಣ ಸದ್ದು ಕೇಳಿಬಂದಿದೆ.
ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಮಾವೇಶದ ಎರಡು ಕಿಮೀ ಅಂತರದಲ್ಲೇ ಮಿಕ್ಸರ್ ಹಂಚಿಕೆ ಮಾಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಶುಗರ್ಸ್ ವತಿಯಿಂದ ಗ್ರಾಮೀಣ ಉತ್ಸವ ಹೆಸರಲ್ಲಿ ಮಿಕ್ಸರ್, ಪಾತ್ರೆ ಹಂಚಿಕೆ ಮಾಡಲಾಗಿದೆ.
ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಅಲ್ಲದೆ ಗಿಫ್ಟ್ಗೆ ಪ್ರತಿಯಾಗಿ ಹಣ ನೀಡೋದಾಗಿ ಗೋಕಾಕ್ ಸಾಹುಕಾರ್ ಬಹಿರಂಗ ಘೋಷಣೆ ಮಾಡಿದ್ದಾರೆ.ಟಿಫಿನ್ ಬಾಕ್ಸ್, ಮಿಕ್ಸಿ ಸೇರಿದಂತೆ ಎಲ್ಲಾ 3 ಸಾವಿರದ ಐಟಮ್ಗಳನ್ನು ಲಕ್ಷ್ಮೀ ಹೆಬ್ಬಾಳ್ಕರ್ ನೀಡುತ್ತಿದ್ದಾರೆ. ಆದ್ರೆ ನಾವು ಆರು ಸಾವಿರ ರೂಪಾಯಿ ನೀಡುತ್ತೇವೆ ವೋಟ್ ಹಾಕಿ ಎಂದು ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಅವರು ಖರ್ಚು ಮಾಡಿದ್ದಕ್ಕಿಂತ ಹತ್ತು ಕೋಟಿ ಹೆಚ್ಚು ಖರ್ಚು ಮಾಡ್ತೀನಿ ಎಂದು ಸಮಾವೇಶದಲ್ಲಿ ರಮೇಶ್ ಜಾರಕಿಹೊಳಿ ಘೋಷಿಸಿದ್ದಾರೆ.