ಸಿದ್ದರಾಮಯ್ಯ ಎದುರು ಬಾದಾಮಿ ಕ್ಷೇತ್ರದ ಮಹಿಳೆಯರು ಕಣ್ಣೀರು!

ಬಾಗಲಕೋಟೆ : ಕೋಲಾರ ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಬಾದಾಮಿ ಕ್ಷೇತ್ರದ ಮಹಿಳೆಯರು ಕಣ್ಣೀರು ಹಾಕಿ ಮನವಿ ಮಾಡಿದ್ದಾರೆ.
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಬಾದಾಮಿ ಕ್ಷೇತ್ರದ ಅವರ ಅಭಿಮಾನಿಗಳು ಆಗಮಿಸಿದ್ದು, ತಾವು ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಎದುರಲ್ಲೇ ಮಹಿಳೆಯರು ಕಣ್ಣೀರು ಹಾಕಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಮುಂದೆ ನೂರಾರು ಅಭಿಮಾನಿಗಳು ಆಗಮಿಸಿ ಘೋಷಣೆ ಕೂಗುವ ಮೂಲಕ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಾಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಬಾದಾಮಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಮಾಡಲೇಬೇಕು, ಸಿದ್ದರಾಮಯ್ಯ ಸ್ಪರ್ಧೆ ಮಾಡದಿದ್ರೆ ಸಾಮೂಹಿಕ ರಾಜೀನಾಮೆ ಕೊಡುತ್ತೇವೆ ಎಂದು ಗ್ರಾಮಪಂಚಾಯ್ತಿ, ಪಟ್ಟಣ ಪಂಚಾಯ್ತಿ ಸದಸ್ಯರ ಎಚ್ಚರಿಕೆ ನೀಡಿದ್ದಾರೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನ ಸಭಾ ಚುನಾವಣೆಗೆ ಯಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ.