ಹಾವೇರಿ | ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಹಾವೇರಿ | ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಹಾವೇರಿ: ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಬಂದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮತ್ತಿಕೇರಿಯ ನಿವಾಸಿ ಜಿಎಂ ಸಂಗನಗೌಡ ಎಂಬವರೇ ಮೃತ ಶಿಕ್ಷಕರಾಗಿದ್ದು, ಅವರು 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ್ದರು.

ಈ ವೇಳೆ ಅವರು ಗೆಳೆಯರ ಬಳಗದ ಶಾಲೆಯಲ್ಲಿ ತಂಗಿದ್ದು, ರಾತ್ರಿ ಊಟ ಮಾಡಿ ಮಲಗಿದ್ದ ಸಂಗನಗೌಡರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಅವರ ಮೃತದೇಹವನ್ನು ನಿನ್ನೆ ರಾತ್ರಿಯೇ ಸ್ವಗ್ರಾಮಕ್ಕೆ ತರಲಾಗಿದ್ದು, ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ