ರೋರಿಂಗ್ ಸ್ಟಾರ್ ಶ್ರೀಮುರಳಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ : 3 ತಿಂಗಳು ಡ್ಯಾನ್ಸ್, ಫೈಟ್ ಮಾಡದಂತೆ ವೈದ್ಯರ ಸೂಚನೆ

ರೋರಿಂಗ್ ಸ್ಟಾರ್ ಶ್ರೀಮುರಳಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ : 3 ತಿಂಗಳು ಡ್ಯಾನ್ಸ್, ಫೈಟ್ ಮಾಡದಂತೆ ವೈದ್ಯರ ಸೂಚನೆ

ಬೆಂಗಳೂರು : ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಇಂದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, 3 ತಿಂಗಳು ಡ್ಯಾನ್ಸ್, ಫೈಟ್ ಮಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಸಾಹಸ ಸನ್ನಿವೇಶದ ಶೂಟಿಂಗ್ ವೇಳೆ ರಾಕ್ ಲೈನ್ ಸ್ಟುಡಿಯೋದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಶ್ರೀಮುರುಳಿ ಅವರ ಮೊಣಕಾಲಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, 3 ತಿಂಗಳು ಡ್ಯಾನ್ಸ್, ಫೈಟ್ ಮಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮುರುಳಿಗೆ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದು,ನಂತರ ವಾಕಿಂಗ್, ರನ್ನಿಂಗ್ ಮಾಡುವಂತೆ ಹೇಳಿದ್ದಾರೆ.