31 ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಮಾಡಲು ನಿರ್ಣಯ: ಹಾಲಪ್ಪ ಆಚಾರ್

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಭರಾಟೆ ಜೋರಾಗಿದೆ.ನಾನಾ ಸರ್ಕಸ್ಗಳನ್ನು ಮಾಡುತ್ತಿವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ.
ನಗರದಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ಮಾರ್ಚ್ 4 ರಂದು ಸಿಎಂ ಚಾಲನೆ ಕೊಡಲಿದ್ದಾರೆ. ಮಾರ್ಚ್ 20ರ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಎಲ್ಲ ಫಲಾನುಭವಿಗಳನ್ನು ಒಂದೆಡೆ ಸೇರಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಡಿಸಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ಎಂದರು.