6ನೇ ದ್ವಿಶತಕ ಸಿಡಿಸಿದ ಕೇನ್ ವಿಲಿಯಮ್ಸನ್; ಲಂಕಾ ವಿರುದ್ಧ ಕಿವೀಸ್ ಮೇಲುಗೈ

6ನೇ ದ್ವಿಶತಕ ಸಿಡಿಸಿದ ಕೇನ್ ವಿಲಿಯಮ್ಸನ್; ಲಂಕಾ ವಿರುದ್ಧ ಕಿವೀಸ್ ಮೇಲುಗೈ

ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ದಿನದಾಟದಲ್ಲಿ ನ್ಯೂಜಿಲೆಂಡ್ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದೆ. ಮೊದಲ ದಿನದಾಟ ಬಹುತೇಕ ಮಳೆಗೆ ಆಹುತಿಯಾಗಿದ್ದು ಬಳಿಕ ಬ್ಯಾಟಿಂಗ್ ಆರಂಭಿಸಿದ್ದ ನ್ಯೂಜಿಲೆಂಡ್ ಉತ್ತಮ ಬ್ಯಾಟಿಂಗ್‌ನ ಮುನ್ಸೂಚನೆ ನೀಡಿತ್ತು.

ಎರಡನೇ ದಿನದಾಟದಲ್ಲಿ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ನ್ಯೂಜಿಲೆಂಡ್ ತಂಡದ ನಾಯಕ ತನ್ನ ಅದ್ಭುತ ಫಾರ್ಮ್ ಮುಂದುವರಿಸಿದ್ದು ಈ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ತಮ್ಮ 6ನೇ ಟೆಸ್ಟ್ ದ್ವಿಶತಕ ಪೂರ್ಣಗೊಳಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ನ್ಯೂಜಿಲೆಂಡ್ ತಂಡದ ಪರವಾಗಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿರುವ ಕೇಮ್ ವಿಲಿಯಮ್ಸನ್ ಟೆಸ್ಟ್ ಮಾದರಿಯಲ್ಲಿ 8000 ರನ್‌ಗಳ ಮೈಲಿಗಲ್ಲು ಪೂರ್ಣಗೊಳಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ ಎನಿಸಿಕೊಂಡಿದ್ದಾರೆ ಕಿವೀಸ್ ಮಾಜಿ ನಾಯಕ.

ಇದು ಒಟ್ಟಾರೆಯಾಗಿ ಕೇನ್ ವಿಲಿಯಮ್ಸನ್ ಅವರ 28ನೇ ಟೆಸ್ಟ್ ಶತಕವಾಗಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ ಶತಕದ ಸಾಧನೆಯನ್ನು ಕೇನ್ ವಿಲಿಯಮ್ಸನ್ ಸರಿಗಟ್ಟಿದ್ದಾರೆ. 215 ರನ್‌ಗಳಿಸಿದ ಗಳಿಕ ಕೇನ್ ತಮ್ಮ ವಿಕೆಟ್ ಕಳೆದುಕೊಂಡಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿಯೂ ಭರ್ಜರಿ ಶತಕ ಸಿಡಿಸುವ ಮೂಲಕ ನ್ಯೂಜಿಲೆಂಡ್ ತಂಡದ ಗೆಲುವಿಗೆ ಕಾರಣವಾಗಿದ್ದರು.

ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಮತ್ತೋರ್ವ ದಾಂಡಿಗ ಹೆನ್ರಿ ನಿಕೋಲ್ಸ್ ಕೂಡ ಅಮೋಘ ಪ್ರದರ್ಶನ ನೀಡಿದ್ದು ಬೃಹತ್ ಶತಕ ಸಿಡಿಸಿದ್ದಾರೆ. ಈ ಜೋಡಿ ಬರೊಬ್ಬರಿ 363 ರನ್‌ಗಳ ಬೃಹತ್ ಜೊತೆಯಾಟದಲ್ಲಿಯೂ ಭಾಗಿಯಾಗಿದ್ದು ಕಿವೀಸ್ ಪಡೆಯ ಬೃಹತ್ ಮೊತ್ತಕ್ಕೆ ಕಾರಣವಾದರು.

ಇನ್ನು ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ರೋಚಕವಾಗಿ ಅಂತ್ಯಕಂಡಿತ್ತು. ಪಂದ್ಯದ ಅಂತಿಮ ಎಸೆತದಲ್ಲಿ ಫಲಿತಾಂಶ ನಿರ್ಧಾರವಾಗಿದ್ದು ಆ ಪಂದ್ಯವನ್ನು ಆತಿಥೇಯ ನ್ಯೂಜಿಲೆಂಡ್ ತಂಡ ಗೆದ್ದು ಬೀಗಿದೆ. ಆ ಮೂಲಕ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಸ್ಪರ್ಧೆಯಿಂದ ಹೊರಬಿದ್ದಿದ್ದು ಭಾರತ ತಂಡ ಫೈನಲ್‌ಗೆ ಪ್ರವೇಶ ಪಡೆಯಿತು.

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಡೌಗ್ ಬ್ರೇಸ್‌ವೆಲ್, ಟಿಮ್ ಸೌಥಿ (ನಾಯಕ), ಮ್ಯಾಟ್ ಹೆನ್ರಿ, ಬ್ಲೇರ್ ಟಿಕ್ನರ್

ಬೆಂಚ್: ವಿಲ್ ಯಂಗ್, ಸ್ಕಾಟ್ ಕುಗ್ಗೆಲೀಜ್ನ್

ಶ್ರೀಲಂಕಾ ಆಡುವ ಬಳಗ: ಓಷಾದ ಫೆರ್ನಾಂಡೋ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಾಲ್, ಧನಂಜಯ ಡಿ ಸಿಲ್ವ, ನಿಶಾನ್ ಮದುಷ್ಕ (wk), ಕಸುನ್ ರಜಿತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೋ

ಬೆಂಚ್: ಚಾಮಿಕಾ ಕರುಣಾರತ್ನ, ರಮೇಶ್ ಮೆಂಡಿಸ್, ಕಮಿಂದು ಮೆಂಡಿಸ್, ಮಿಲನ್ ಪ್ರಿಯನಾಥ್ ರಥನಾಯಕ, ನಿರೋಶನ್ ಡಿಕ್ವೆಲ್ಲಾ, ವಿಶ್ವ ಫೆರ್ನಾಂಡೋ