H.D ಕುಮಾರಸ್ವಾಮಿಯನ್ನು ಬಿಜೆಪಿಗೆ ಆಹ್ವಾನಿಸಿದ ಶಾಸಕ 'ಪ್ರೀತಂ ಗೌಡ'

ಹಾಸನ : ಕುಮಾರಣ್ಣ ಬಿಜೆಪಿಗೆ ಬಂದರೆ ಸ್ವಾಗತ, ಕುಮಾರಣ್ಣನನ್ನು ನಾನು ಬಿಜೆಪಿಗೆ ಕರೆಯುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪ್ರೀತಂಗೌಡ ಕುಮಾರಸ್ವಾಮಿ ನನ್ನ ಹಿತೈಶಿ.
ಕುಮಾರಣ್ಣ ಬಿಜೆಪಿಗೆ ಬಂದರೆ ಸ್ವಾಗತ, ಕುಮಾರಣ್ಣನನ್ನು ನಾನು ಬಿಜೆಪಿಗೆ ಕರೆಯುತ್ತಿದ್ದೇನೆ. ಅವರು ಬಿಜೆಪಿಗೆ ಬಂದ್ರೆ ಯಾರು ಬೇಡ ಅಂತಾರೇ..ಬಂದರೆ ಸ್ವಾಗತ ಎಂದು ಪ್ರೀತಂ ಗೌಡ ಹೇಳಿದ್ದಾರೆ. ಕುಮಾರಣ್ಣ ಅವರು ಯಾವುದೇ ಕಾರಣಕ್ಕೂ ರೇವಣ್ಣ ಅವರ ಮನೆಯವರನ್ನು ಕ್ಯಾಂಡಿಡೇಟ್ ಮಾಡಲ್ಲ, ಎಂದು ಶಪಥ ಮಾಡಿದ್ದಾರೆ ಹೊರತು ಪ್ರೀತಂ ಗೌಡನನ್ನು ಚುನಾವಣೆಯಲ್ಲಿ ಸೋಲಿಸುತ್ತೇನೆ ಎಂದು ಶಪಥ ಮಾಡಿಲ್ಲ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಬೇಕು - ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ( BJP Government ) ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ( Siddaramaiah ) ಅವರು, ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಮನೆಗೆ ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ವೇಳೆ ಮಾತನಾಡಿದಂತ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ ಎಂದರು.