ವಾಲ್ಮೀಕಿ ಪುತ್ಥಳಿ ನಿರ್ಮಾಣ ವಿಚಾರದಲ್ಲಿ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರ ನಡುವೆ ಗಲಾಟೆ

ವಾಲ್ಮೀಕಿ ಪುತ್ಥಳಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ವಿಚಾರದಲ್ಲಿ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರಗಳ ನಡುವೆ ವಾಗ್ವಾದ ನಡೆದಿರುವ ಘಟನೆ ಕೋಲಾರ ನಗರದ ಜೂನಿಯರ್ ಕಾಲೇಜ್ ಮುಂಬಾಗ ನಡೆದಿದೆ. ಜಿಲ್ಲಾಡಳಿತ ವತಿಯಿಂದ ನಗರದ ಜೂನಿಯರ್ ಕಾಲೇಜ್ ಮುಂಬಾಗ ವಾಲ್ಮೀಕಿ ಪುತ್ಥಳಿ ನಿರ್ಮಾಣ ಮಾಡುವ ಶಂಕುಸ್ಥಾಪನೆ ಕಾಮಗಾರಿಗೆ ಇಂದು ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗಿಯಾಗದ ಕಾರಣ ಪುತ್ಥಳಿ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಂದೂಡಲು ಜಿಲ್ಲಾಡಳಿತ ಮುಂದಾಗಿತ್ತು. ಆದ್ರೆ ಕಾರ್ಯಕ್ರಮ ಮುಂದೂಡವ ಜಿಲ್ಲಾಡಳಿತ ಪ್ರಯತ್ನಕ್ಕೆ ತ್ರೀವ ವಿರೋಧ ವ್ಯಕ್ತಪಡಿಸಿದ ವಾಲ್ಮೀಕಿ ಸಮುದಾಯದ ಮುಖಂಡರು ಇಂದೆ ಶಂಕುಸ್ಥಾಪನೆ ನೇರವೇರಿಸುವಂತೆ ಒತ್ತಾಯಿಸಿ ಸ್ಥಳೀಯ ಸಂಸದರು ಹಾಗೂ ಶಾಸಕರು ವಿರುದ್ಧ ಪ್ರತಿಭಟನೆ ನಡೆಸಿ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿದ್ರು. ನಾವೇ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಮುಖಂಡರು ಹಠ ಹಿಡಿದ್ರು. ಈ ವೇಳೆ ಜಿಲ್ಲಾಧಿಕಾರಿ ಆರ್ ಸೆಲ್ವಮಣಿ ಹಾಗೂ ಜಿಲ್ಲಾ ಎಸ್ಪಿ ಡೆಕ್ಕ ಕಿಶೋರ್ ಬಾಬು ಮದ್ಯ ಪ್ರವೇಶಿಸಿ ಸಂಸದರು ಹಾಗೂ ಶಾಸಕರ ಇಲ್ಲದ ಕಾರಣ ಶಂಕುಸ್ಥಾಪನೆ ಮುಂದೂಡಿಕೆಗೆ ಸಹಕರಿಸುವಂತೆ ಮುಖಂಡರಲ್ಲಿ ಮನವಿ ಮಾಡಿದರು. ಅದ್ರೆ ಪ್ರತಿಭಟನಾಕಾರರು ಅಧಿಕಾರಿಗಳ ಮನವಿಗೆ ಮಣಿಯದೇ ಶಂಕುಸ್ಥಾಪನೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಕಾರ್ಯಕ್ರಮಕ್ಕೆ ಹಾಜರಾಗದೇ ನಿರ್ಲಕ್ಷ ವಹಿಸಿದ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.