ಮಾಜಿ ಶಾಸಕ ಹಾಗೂ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ.

ಮಾಜಿ ಶಾಸಕ ಹಾಗೂ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ.

ದೇವನಹಳ್ಳಿ: ಮಾಜಿ ಶಾಸಕ ವೆಂಕಟಸ್ವಾಮಿಗೆ ಹೃದಯಾಘಾತವಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಈ ಹಿಂದೆ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಶಾಸಕರಾಗಿದ್ದರು. ಇವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಹೌದು.ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದ ವೆಂಕಟಸ್ವಾಮಿಗೆ ಇಂದು ಮುಂಜಾನೆ ಹೃದಯಾಘಾತವಾಗಿದೆ. ನಿನ್ನೆಯೂ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಪ್ರಚಾರ ಮಾಡಿ ಮನೆಗೆ ತೆರಳಿದ್ದರು ಎನ್ನಲಾಗಿದೆ. ಪ್ರಸ್ತುತ ಐಸಿಯುನಲ್ಲಿ ವೆಂಕಟಸ್ಚಾಮಿ‌ಗೆ ಚಿಕಿತ್ಸೆ ನೀಡಲಾಗುತ್ತಿದೆ.