ಇಂದು ರಾತ್ರಿ 8ಕ್ಕೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ 1:1 ತಾತ್ಕಾಲಿಕ ಪಟ್ಟಿ ಪ್ರಕಟ - ಸಚಿವ ಬಿ.ಸಿ ನಾಗೇಶ್ ಘೋಷಣೆ

ಇಂದು ರಾತ್ರಿ 8ಕ್ಕೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ 1:1 ತಾತ್ಕಾಲಿಕ ಪಟ್ಟಿ ಪ್ರಕಟ - ಸಚಿವ ಬಿ.ಸಿ ನಾಗೇಶ್ ಘೋಷಣೆ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ನಂತ್ರ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಆದ್ರೇ ಕೆಲ ಅಭ್ಯರ್ಥಿಗಳು ತಂದೆಯ ಜಾತಿ ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ತಂದೆಯ ಜಾತಿ ಆದಾಯ ಪ್ರಮಾಣಪತ್ರವನ್ನು ಪರಿಗಣಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಮರು ಸಿದ್ದಪಡಿಸಲಾಗಿರುವಂತ 15,000 ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾತ್ರಿ 8 ಗಂಟೆಗೆ ಪ್ರಕಟಿಸಲಾಗುತ್ತಿದೆ.

ಈ ಕುರಿತಂತೆ ಟ್ವಿಟ್ ( Twitter ) ಮಾಡಿ ಮಾಹಿತಿ ನೀಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು, 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ( Karnataka High Court ) ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ '1:1 ತಾತ್ಕಾಲಿಕ ಆಯ್ಕೆ ಪಟ್ಟಿ'ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), ಬೊಳ್ಜೆ (ಸಾಮಾನ್ಯ), ಪಿತ್ರೋಡಿ (ಸಾಮಾನ್ಯ), ಬಬ್ಬರ್ಯಗುಡ್ಡೆ (ಸಾಮಾನ್ಯ), ಬೊಟ್ಟಲ (ಸಾಮಾನ್ಯ), ಎರ್ಮಾಳು ಬಡಾ (ಸಾಮಾನ್ಯ), ನವಶಕ್ತಿ (ಸಾಮಾನ್ಯ), ಮಹಾತ್ಮಾಗಾಂಧಿ ಶಾಲೆ (ಸಾಮಾನ್ಯ), ಎಲ್.ವಿ.ಪಿ-2 (ಸಾಮಾನ್ಯ), ಪೊಲಿಪು ಗರಡಿ (ಸಾಮಾನ್ಯ), ಕಡೆಕಾರು ಪಡುಕೆರೆ (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 19 ರಿಂದ 35 ವರ್ಷದೊಳಗಿನ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ, ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ, ಸಾಮಾನ್ಯ ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ದೂರವಾಣಿ ಸಂಖ್ಯೆ : 0820-2524055 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ