ಈ ಬಾರಿ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಖಚಿತ: ಹೆಚ್ಕೆ ಪಾಟೀಲ್

ಗದಗ: ಜಿಲ್ಲೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆದಿದೆ. ಈ ವೇಳೆ ಶಾಸಕ ಹೆಚ್ ಕೆ ಪಾಟೀಲ್ ಪ್ರತಿಕ್ರಿಯಿ ನೀಡಿ, ಈ ಬಾರಿ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈ ಸಲ ಸಿದ್ದರಾಮಯ್ಯನವರಿಗೆ ನಿರಾಸೆ ಮಾಡಲ್ಲ. ನಾಲ್ಕು ಕ್ಷೇತ್ರದಲ್ಲಿ ಗೆದ್ದು ಕೊಡುತ್ತೇವೆ. ನಮ್ಮ ಕಾರ್ಯಕ್ರಮಗಳ ಮೂಲಕ ನಾವು ಮತ ಕೇಳುತ್ತೇವೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿ ನಿನ್ನೆ ಶಿವಮೊಗ್ಗದಲ್ಲಿ ಜನರ ಬಗ್ಗೆ ಒಂದು ಮಾತನ್ನೂ ಮಾತಾಡಲಿಲ್ಲ. ಸೋನಿಯಾ ಗಾಂಧಿಯವರಿಗೆ ಛತ್ರಿ ಹಿಡಿದಿದ್ರು, ಖರ್ಗೆ ಅವರಿಗೆ ಛತ್ರಿ ಹಿಡಿದಿಲ್ಲ ಅಂದರು. ಧ್ವಜಾರೋಹಣ ಮಾಡುವಾಗ ಯಾರಾದರೂ ಛತ್ರಿ ಹೀಡಿಯುತ್ತಾರಾ? ಎಂದು ಪ್ರಶ್ನಿಸಿದರು. ಖರ್ಗೆಯವರು ಬರುವ ಐದು ನಿಮಿಷ ಮುಂಚೆ ಇರುತ್ತಾರೆ, ಅಡ್ವಾಣಿ ಅವರು ವೇದಿಕೆ ಮೇಲೆ ಬಂದರೆ ಒಂದು ನಮಸ್ಕಾರ ಮಾಡಲಿಲ್ಲ ನೀವು ಅಂತ ಮೋದಿಗೆ ಟಾಂಗ್ ಕೊಟ್ಟರು.
ಬೆಳಗಾವಿಯಲ್ಲಿ ಮೋದಿ ಅವರು ಮಹದಾಯಿ ಬಗ್ಗೆ ಒಂದೂ ಮಾತಾಡಲಿಲ್ಲ. ಮಹದಾಯಿ ವಿಚಾರದಲ್ಲಿ ಅನ್ಯಾಯ ಆದ್ರೂ ಸುಮ್ಮನೇ ಕೂತಿದ್ದೀರಲ್ಲ ಬೊಮ್ಮಾಯಿ ಅವರೇ ನಾಚಿಕೆ ಆಗುವುದಿಲ್ವಾ? ಮಹದಾಯಿ ವಿಚಾರದಲ್ಲಿ ಅರಣ್ಯಕ್ಕೆ ಅರ್ಜಿ ಕೊಡಬೇಕಾಗಿಲ್ಲ ಅಂತಾ ಪ್ರಲ್ಹಾದ್ ಜೋಶಿ ಹೇಳಿದ್ದರು. ಮರುದಿನ ಅರ್ಜಿ ಕೊಟ್ಟಿರಲ್ಲ ನಿಮಗೆ ಅರಣ್ಯ ಭೂಮಿ ಸಿಕ್ಕಿತಾ ಅಂತ ಎಂದಿದ್ದಾರೆ.