ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ: ದ್ವಿಚಕ್ರ ವಾಹನ ಸಂಚಾರ ನಿರ್ಬಂಧಕ್ಕೆ ಚಿಂತನೆ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆದಿದ್ದು, ಬಿಇಟಿಪಿಎಲ್ ಕಂಪನಿಗೆ ಸಂಚಾರ ಪೊಲೀಸರು ಪತ್ರ ಬರೆದಿದ್ದಾರೆ.
'ನಗರದಿಂದ ಹೊಸೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿರುವ ಮೇಲ್ಸೇತುವೆಯಲ್ಲಿ ದಿನದಿಂದ ದಿನಕ್ಕೆ ಅಪಘಾತ ಗಳು ಹೆಚ್ಚುತ್ತಿವೆ.
'ಬೆಂಗಳೂರು ಎಲಿವೇಟೆಡ್ ಟೋಲ್ ಪ್ರೈವೇಟ್ ಲಿಮಿಟೆಡ್ (BETPL) ಕಂಪನಿಗೆ ಈಗಾಗಲೇ ಪತ್ರ ಬರೆಯ ಲಾಗಿದೆ. ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಇರುವ ಅವಕಾಶ ಹಾಗೂ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಕಂಪನಿ ಅಧಿಕಾರಿಗಳ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.