ಏ.1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.
ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ ಮೂಲ ವೇತನ ಎಂದರು ಸ್ರಕಾರಿ ನೌಕರರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಎಂದು ತಿಳಿಸಿದ್ದಾರೆ.