ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಉದ್ಯೋಗ ಭರ್ತಿ' : ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ 2.5 ಲಕ್ಷ ' ಉದ್ಯೋಗ ಭರ್ತಿ' ಮಾಡಲಾಗುತ್ತದೆ ಎಂದುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.
ಇಂದು ಯುವಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ ಈ ಚುನಾವಣೆ ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವವಾದ ಚುನಾವಣೆ. ಇಡೀ ದೇಶಕ್ಕೆ ಈ ಚುನಾವಣೆ ಸಂದೇಶ ನೀಡಲಿದೆ. ಹೀಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಿದೆ. ನಿಮ್ಮೆಲ್ಲರ ಆಶೀರ್ವಾದ, ಸಹಕಾರ ನಮ್ಮ ಮೇಲೆ ಸದಾ ಇರಬೇಕು. ನಾನು ಎಐಸಿಸಿ ಅದ್ಯಕ್ಷನಾದ ನಂತರ ಬೆಳಗಾವಿ ಭೂಮಿಗೆ ಬಂದಿದ್ದೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ 2.5 ಲಕ್ಷ ' ಉದ್ಯೋಗ ಭರ್ತಿ' ಮಾಡಲಾಗುತ್ತದೆ ಎಂದು ಎಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ. ಈ ಬೆಳಗಾವಿ ಕಾಂಗ್ರೆಸ್ ಪಕ್ಷಕ್ಕೆ ಪವಿತ್ರವಾದ ಭೂಮಿ. ಮಹಾತ್ಮ ಗಾಂಧಿ ಅವರು 100 ವರ್ಷಗಳ ಹಿಂದೆ 39ನೇ ಕಾಂಗ್ರೆಸ್ ಅಧಿವೇಶನ ನಡೆಸಿ ಇದೇ ಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ಈಗ ನಾನು ಅದೇ ಸ್ಥಾನಕ್ಕೆ ಆಯ್ಕೆ ಮಾಡಿದ್ದೀರಿ. ಇದಕ್ಕಾಗಿ ನಿಮ್ಮೆಲ್ಲರಿಗೂ ವಂದನೆಗಳನ್ನು ತಿಳಿಸಿದರು.
ಯುವಕರ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷ ( Congress Party ) ಪ್ರತಿ ಪಧವಿಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವ ಯುವಕರಿಗೆ 1500 ರೂ.ಗಳನ್ನು 2 ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ( Congress Government ) ಉದ್ಯೋಗ ( Jobs ) ನೀಡಲಿದೆ. ಇನ್ನು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಖಾಲಿ ಇರುವ 2.50 ಲಕ್ಷ ಉದ್ಯೋಗವನ್ನು ಭರ್ತಿ ಮಾಡಲಾಗುವುದು ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಈ ಬಳಿಕ ಮಾತನಾಡಿದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೆಲ ತಿಂಗಳ ಹಿಂದೆ ಕರ್ನಾಟಕದ ಮೂಲಕ ಭಾರತ ಜೋಡೋ ಯಾತ್ರೆ ಸಾಗಿತ್ತು. ಈ ಯಾತ್ರೆ ಸಂದರ್ಭದಲ್ಲಿ ಎಲ್ಲ ವರ್ಗದ ಜನ ಅಭೂತಪೂರ್ವ ಬೆಂಬಲ ನೀಡಿ ನಮಗೆ ಶಕ್ತಿ ತುಂಬಿದ್ದಿರಿ, ಯಾತ್ರೆ ಯಶಸ್ಸುಗೊಳಿಸಿದ್ದಿರ. ಅದಕ್ಕಾಗಿ ನಿಮಗೆ ಧನ್ಯವಾದಗಳು. ಇಡೀ ದೇಶಕ್ಕೆ ಈ ಯಾತ್ರೆ ಸಂದೇಶ ರವಾನಿಸಿತ್ತು. ಈ ದೇಶ ಎಲ್ಲರಿಗೂ ಸೇರಿದ್ದು, ಒಂದಿಬ್ಬರ ಸ್ವತ್ತ. ಅಧಾನಿ ಅವರ ಸ್ವತ್ತಲ್ಲ. ಈ ದೇಶ ರೈತರು, ಯುವಕರು, ಬಡವರಿಗೆ ಸೇರಿದ ದೇಶವಿದೆ ಎಂದರು.
ಕಾಂಗ್ರೆಸ್ ಪಕ್ಷ ಇಲ್ಲಿನ 18 ಕ್ಷೇತ್ರಗಳಲ್ಲಿ 15-16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿದ್ದರು. ಈ ಬಾರಿ ನಮ್ಮ ನಾಯಕರ ಒಘ್ಗಟ್ಟು ನೋಡಿದರೆ ಈ ಬಾರಿ 18ಕ್ಕೆ 18 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದರು.ರಾಜ್ಯದ ಇತಿಹಾಸದಲ್ಲಿ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ. ಇದನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಇವರು ಮೋದಿ ಅವರಿಗೆ ದೂರು ನೀಡಿದ್ದಾರೆ. ಗುತ್ತಿಗೆದಾರರ ದೂರು ನೀಡಿದಾಗ ಇದರ ತನಿಖೆಗೆ ಅಮಿತ್ ಶಾ ಅವರು ಯಾಕೆ ಆದೇಶ ಮಾಡಲಿಲ್ಲ. ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದದ ವರೆಗೆ ಎಲ್ಲಾ ವರ್ಗ, ಸಮುದಾಯದವರನ್ನು ಮಾತನಾಡಿಸುತ್ತಾ ಅವರ ಸಂಕಷ್ಟ ಆಲಿಸಿ 4 ಸಾವಿರ ಕಿ.ಮೀ ಪಾದಯಾತ್ರೆ ಮಾಡಿದ್ದಾರೆ ಎಂದರು.
ಕಾಶ್ಮೀರದಲ್ಲಿ 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ದೆಹಲಿ ಪೋಲೀಸರು ಸಾಕ್ಷಿ ಕೇಳಿಕೊಂಡು ರಾಹುಲ್ ಗಾಂಧಿ ಅವರ ಮನೆ ಮುಂದೆ ಹೋಗಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡುತ್ತಿದ್ದರೂ ಇಲ್ಲಿ ತನಿಖೆ ಮಾಡುತ್ತಿಲ್ಲ. ರಾಜ್ಯದಲ್ಲಿ 100 ರೂ. ಕಾಮಗಾರಿ ಇದ್ದರೆ 200 ರೂ. ಅಂದಾಜು ನಿಗದಿ ಮಾಡಿ ರಾಜ್ಯದವರು 40% ಕೇಂದ್ರದವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುಡುಗಿದರು.ಮೋದಿ ಅವರು ಬೆಳಗಾವಿಗೆ ಬಂದು ನನ್ನ ಬಗ್ಗೆ ಮಾತನಾಡಿದ್ದಾರೆ. ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ದೆ ಎಂದಿದ್ದಾರೆ. ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ. ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ ಇದೆ, ಜಾತಿ ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ? ಬಿಜೆಪಿಯವರು ಸುಳ್ಳನ್ನು ಹೇಳುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಇದು ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮನ ನಾಡು. ಈ ಭಾಗದಲ್ಲಿ ವೀರರು ಶೂರರು ಇದ್ದಾರೆ. ಈ ಜನರನ್ನು ಇಡಿ, ಸಿಬಿಐ ಮಣಿಸುವುದಿಲ್ಲ. ಇವರ ಬೆದರಿಕೆಗೆ ರಾಹುಲ್ ಗಾಂಧಿ ಅವರು ಎಂದಿಗೂ ಹೆದರುವುದಿಲ್ಲ. ಇವರು ಎಷ್ಟು ದಿನ ತೊಂದರೆ ನೀಡುತ್ತಾರೋ ನೀಡಲಿ. ನಾವು ಎಲ್ಲದಕ್ಕೂ ಸಿದ್ಧವಿದ್ದೇವೆ. ಮೋದಿ ಅವರೇ ನೀವು ನಮ್ಮನ್ನು ಮಣ್ಣಿನಲ್ಲಿ ಹೂತು ಹಾಕಲು ಪ್ರಯತ್ನಿಸಿ. ನಾವು ಬೀಜವಾಗಿದ್ದು, ನಾವು ಪದೇ ಪದೇ ಹುಟ್ಟಿಬರುತ್ತೇವೆ ಎಂದರು