'ಕಾಂಗ್ರೆಸ್ ಪಕ್ಷ ಟಿಕೆಟ್'ಗಾಗಿ ಅರ್ಜಿ ಸಲ್ಲಿಸಿದ 'ನಟಿ ಭಾವನಾ'

ಬೆಂಗಳೂರು: ಕೆಪಿಸಿಸಿಯಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಯಾರು ಬೇಕಾದರೂ ಅಭ್ಯರ್ಥಿಗಳಾಗೋದಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಎಂಬುದಾಗಿ ಆಹ್ವಾನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಟೆಕೆಟ್ ಗಾಗಿ ನಟಿ ಭಾವನಾ ( Actress Bhavana ) ಇಂದು ಅರ್ಜಿ ಸಲ್ಲಿಸಿದ್ದಾರೆ.
ಯಶವಂತಪುರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ( Congress Party ) ಅಭ್ಯರ್ಥಿಯಾಗಿ ಒಲವವನ್ನು ನಟಿ ಭಾವನಾ ಹೊಂದಿದ್ದರು. ಈ ಹಿನ್ನಲೆಯಲ್ಲಿಯೇ ಅವರು ಇಂದು ಕೆಪಿಸಿಸಿ ಕಚೇರಿಗೆ ತೆರಳಿ, ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಅಂದಹಾಗೇ ಈಗಾಗಲೇ ಸಾವಿರಾರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸೋದಕ್ಕೆ ಬಹಿರಂಗವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನಿಸಿದ್ದರು. ಅವರ ಆಹ್ವಾನದ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿರುವಂತ ಅನೇಕರು ಅರ್ಜಿಯನ್ನು ಸಲ್ಲಿಸಿದ್ದಾರೆ.