ಕುಂದಾನಗರಿಯಲ್ಲಿ ಮತ್ತೆ ಹರಿದ ರಕ್ತಪಾತ: ಮಗಳಿಗೆ ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ನಾಲ್ವರಿಗೆ ಚಾಕು ಇರಿದಿದ್ದಾರೆ.
ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಮಂಗಳವಾರ ಸಂಜೆ ತಮ್ಮ ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಲು ತಂದೆ ಹಿರಿಯರ ಸಮೇತ ಹೋಗಿದ್ದರು. 17 ವರ್ಷದ ಬಾಲಕ ಹಾಗೂ ಆತನ ಸ್ನೇಹಿತರಿಗೆ ಬುದ್ದಿ ಹೇಳಲು ಹೋದಾಗ ಜಗಳ ನಡೆದು ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಬಾಲಕಿಯ ತಂದೆಯೊಂದಿಗಿದ್ದ ನಾಲ್ವರ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿಯಲಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೆ, ಆರೋಪಿ ಕಡೆಯ ಓರ್ವ ವ್ಯಕ್ತಿಗೂ ಗಾಯವಾಗಿದೆ. ರಫೀಕ್ ಕುರಿಕೊಪ್ಪ, ಸಾಹಿದ್ ಸೌದಾಗರ್, ಅತಾಹುಲ್ಲಾ ಹುಬ್ಬಳ್ಳಿ, ಮೆಹಬೂಬ್ ಹುಬ್ಬಳ್ಳಿ ಎಂಬುವರು ಚಾಕು ಇರಿತಕ್ಕೆ ಒಳಗಾದವರು. ಜಗಳ ಬಿಡಿಸಲು ಹೋದ ರವಿ ತಿಮ್ಮನ್ನರ್ ಎಂಬುವರ ಮೇಲೆಯೂ ಹಲ್ಲೆ ನಡೆಸಲಾಗಿದೆ