ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ : ಶಾಸಕ ತನ್ವೀರ್ ಸೇಠ್ ಹೇಳಿದ್ದೇನು ಗೊತ್ತಾ?

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ : ಶಾಸಕ ತನ್ವೀರ್ ಸೇಠ್ ಹೇಳಿದ್ದೇನು ಗೊತ್ತಾ?

ಮೈಸೂರು : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಕುರಿತಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು ನಿಜ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ತನ್ವೀರ್ ಸೇಠ್, ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು ನಿಜ.

ಅನಾರೋಗ್ಯದ ಕಾರಣ ನಾನು ಈ ನಿರ್ಧಾರ ಮಾಡಿದ್ದೇನೆ. ಅಭಿಮಾನಿಗಲು ನಿರ್ಧಾರ ಬದಲಿಸಿ ಅಂತಾ ಒತ್ತಡ ಹೇರುತ್ತಿದ್ದಾರೆ ಎಂದರು.

ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. `ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹೀಗಾಗಿ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಆದರೆ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

ತನ್ವೀರ್ ಸೇಠ್ ನಿವೃತ್ತಿ ವಿಷಯ ತಿಳಿಯುತ್ತಿದ್ದಂತೆ ಮನೆ ಮುಂದೆ ಬೆಂಬಲಿಗರು ದೌಡಾಯಿಸಿದ್ದಾರೆ. ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುತಂತೆ ಒತ್ತಡ ಹೇರುತ್ತಿದ್ದಾರೆ. ನೂರಾರು ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿ ನಿವೃತ್ತಿ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.