ಜನವರಿ 12ರಂದು ಹುಬ್ಬಳ್ಳಿಯಲ್ಲಿ ಯುವಜನೋತ್ಸವ; ಕಾರ್ಯಕ್ರಮ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ; ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ.
ನಗರದಲ್ಲಿ ಮಾತನಾಡಿದ ಅವರು, ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ನಗರದ ರೈಲ್ವೆ ಮೈದಾನದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಂದಿನ ಕಾರ್ಯಕ್ರಮಕ್ಕೆ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದು, ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು