ಟೋಕಿಯೋ ಒಲಿಂಪಿಕ್ಸ್ 2020: ಸೆಮಿಫೈನಲ್​ಗೆ ಲಗ್ಗೆ ಇಟ್ಟ ಪಿ.ವಿ. ಸಿಂಧು..!

ಟೋಕಿಯೋ ಒಲಿಂಪಿಕ್ಸ್ 2020: ಸೆಮಿಫೈನಲ್​ಗೆ ಲಗ್ಗೆ ಇಟ್ಟ ಪಿ.ವಿ. ಸಿಂಧು..!

ರಿಯೋ ಒಲಿಂಪಿಕ್ಸ್​ ಬೆಳ್ಳಿ ಪದಕ ಗೆದ್ದು ಬೀಗಿದ್ದ ಬ್ಯಾಡ್ಮಿಂಟನ್​ ಆಟಗಾರ್ತಿ ಪಿ.ವಿ. ಸಿಂಧು ಟೋಕಿಯೋ ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ. ಕ್ವಾರ್ಟರ್​ ಫೈನಲ್​ನಲ್ಲಿ ಎದುರಾಳಿ ಜಪಾನ್​ನ ಅಕಾನೆ ಯಮಗುಚಿ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆಲುವು ತಮ್ಮದಾಗಿಸಿಕೊಳ್ಳುವ ಮೂಲಕ ಭಾರತಕ್ಕೆ ಇನ್ನೊಂದು ಪದಕ ಖಚಿತಗೊಳಿಸಿದ್ದಾರೆ.

ಜಪಾನ್​ ಬ್ಯಾಡ್ಮಿಂಟನ್​ ಆಟಗಾರ್ತಿ ಅಕಾನೆ ಯಮಗುಚಿ ವಿರುದ್ಧ ಪಿ.ವಿ ಸಿಂಧು 2-0 ಅಂತರದಲ್ಲಿ ಗೆಲವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 21-13 ಹಾಗೂ ಎರಡನೇ ಸುತ್ತಿನಲ್ಲಿ 22-20 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಪಿ.ವಿ ಸಿಂಧು ಸೆಮಿಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ.