ದೇವೇಗೌಡರ ವಿರುದ್ಧ ಸಿ.ಟಿ ರವಿ ಹೇಳಿಕೆ ಖಂಡಿಸಿ ಮಳವಳ್ಳಿಯಲ್ಲಿ JDS ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ಮಳವಳ್ಳಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಅವರು ಖಾಸಗಿ ಕಾರ್ಯಕ್ರಮದಲ್ಲಿ ಹೆಚ್. ಡಿ ದೇವೇಗೌಡ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಜೆಡಿಎಸ್ ಯುವ ಘಟಕ ಜಿಲ್ಲಾಧ್ಯಕ್ಷ ಕಂಸಾಗರ ರವಿ ಮಾತನಾಡಿ, ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಪ್ರತಿಭಟನೆ ನಡೆಸಿ ನಂತರ ಮಾತನಾಡಿದ ಅವರು, ಪ್ರಧಾನಿ ದೇವೇಗೌಡರು ಮುಂದಿನ ಜನ್ಮದಲ್ಲಿ ಹುಟ್ಟಿದರೇ ಮುಸ್ಲಿಂರಾಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆ. ಸಿ.ಟಿ.ರವಿ ಮುಸ್ಲಿಮರಾಗಿ ಹುಟ್ಟುವುದಿದ್ದರೆ ತಡ ಮಾಡುವುದೇಕೆ ಈಗಲೇ ಹೋಗಲಿ ಎಂದರು.
ಇನ್ನು ಮಂಡ್ಯದಲ್ಲಿ 7 ಕ್ಷೇತ್ರಕ್ಕೆ 7 ಸೀಟನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ. ಕೆ.ಆರ್.ಪೇಟೆಯಲ್ಲಿ ನಾರಾಯಣಗೌಡ ಅವರನ್ನು ಬಿಜೆಪಿಯಲ್ಲಿಯೇ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲಿಸಿ ತೋರಿಸಿ. ಆ ನಂತರ ಉಳಿದ ಕ್ಷೇತ್ರಗಳ ಬಗ್ಗೆ ಮಾತನಾಡುವಂತೆ ಎಂದು ಸವಾಲ್ ಹಾಕಿದ್ದಾರೆ.
ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಿ.ಟಿ.ರವಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ದೂರು ನೀಡಲಾಗುವುದು. ಸಿ.ಟಿ.ರವಿ ಜೆಡಿಎಸ್ ವಿರುದ್ಧವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.