ದೇಶದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪ್ರಮುಖ ಆಧಾರಸ್ತಂಭ: ಪ್ರಧಾನಿ ಮೋದಿ

ನವದೆಹಲಿ : ಈ ವರ್ಷದ ಬಜೆಟ್ ಮೂಲಸೌಕರ್ಯ ವಲಯದ ಮೇಲೆ ಕೇಂದ್ರೀಕರಿಸಿದೆ ಎಂದು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೂಲಸೌಕರ್ಯ ಅಭಿವೃದ್ಧಿಯು ದೇಶದ ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ಪ್ರಮುಖ ಆಧಾರಸ್ತಂಭವಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬ ಪಾಲುದಾರರಿಗೆ ಹೊಸ ಜವಾಬ್ದಾರಿಗಳು, ಸಾಧ್ಯತೆಗಳು ಮತ್ತು ದಿಟ್ಟ ನಿರ್ಧಾರಗಳಿಗೆ ಇದು ಸಮಯ ಎಂದು ಅವರು ಹೇಳಿದರು. 'ರಾಷ್ಟ್ರೀಯ ಮೂಲಸೌಕರ್ಯ ಪೈಪ್‌ಲೈನ್ ಅಡಿಯಲ್ಲಿ, ಮುಂಬರುವ ಸಮಯದಲ್ಲಿ 110 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಇದು ಪ್ರತಿ ಪಾಲುದಾರರಿಗೆ ಹೊಸ ಜವಾಬ್ದಾರಿಗಳು, ಹೊಸ ಸಾಧ್ಯತೆಗಳು ಮತ್ತು ದಿಟ್ಟ ನಿರ್ಧಾರಗಳ ಸಮಯ' ಎಂದು ಪ್ರಧಾನಿ ಮೋದಿ ಹೇಳಿದರು.