ದೋವಲ್ ರಾಜೀನಾಮೆ ನೀಡದಿದ್ದಲ್ಲಿ ಪ್ರಧಾನಿ ಅಧಿಕಾರದಿಂದ ಕೆಳಗಿಳಿಯಬೇಕಾಬಹುದು: ಸ್ವಾಮಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೋವಲ್ ಅವರನ್ನು ಎನ್‌ಎಸ್‌ಎ ಹುದ್ದೆಯಿಂದ ವಜಾಗೊಳಿಸಬೇಕು. ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಪ್ರಕರಣ ಸೇರಿದಂತೆ ಹಲವಾರು ಬಾರಿ ಅವರು ಮೂರ್ಖತನ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯಿಂದ ಕೆಳಗಿಳಿಸಬೇಕು ಇಲ್ಲದೇ ಹೋದಲ್ಲಿ ಮೋದಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವ ಪ್ರಸಂಗ ಎದುರಾಗಬಹುದು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಮುಂದುವರಿದು ಟ್ವೀಟ್ ಬಳಕೆದಾರರು ಈ ಬಗ್ಗೆ ಪ್ರಶ್ನಿಸಿದ್ದು, ಯಾರನ್ನು ಆ ಹುದ್ದೆಗೆ (ಭದ್ರತಾ ಸಲಹೆಗಾರ) ಹುದ್ದೆಗೆ ನೇಮಿಸಬೇಕು ಎಂದು ಪ್ರಶ್ನಿಸಿದ್ದಾರೆ. ಇದ್ದಕ್ಕುತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ನರೇಂದ್ರ ಮೋದಿಗೆ ಅದು ತಿಳಿದಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.