ನಲವಡಿ ಬಳಿ ಕಾರು ಅಪಘಾತ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ, ನಲವಡಿ ಗ್ರಾಮದ ಹೊರಹೊಲಯದ ಟೋಲ್ ಬಳಿ, ವೇಗವಾಗಿ ಬಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗದಗ್ ನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ
ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ.
ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
9 ಲೈವ್ ನ್ಯೂಸ್ ಧಾರವಾಡ