ವಿಜಯಪುರ: ಪತ್ರಿಕಾ ವಿತರಕರಿಗೆ ಕೊರೊನಾ ಲಸಿಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿಜಯ ಕರ್ನಾಟಕ ಪತ್ರಿಕೆಯ ಸಹಯೋಗದೊಂದಿಗೆ ಲಸಿಕೆಯನ್ನು ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ಕವಿತಾ ಮನೆ ಮನೆಗೆ ಪತ್ರಿಕೆ ವಿತರಿಸುವ ಕಾರ್ಯದೊಂದಿಗೆ ಸಾರ್ವಜನಿಕರಿಗೆ ನೇರ ಸಂಪರ್ಕದಲ್ಲಿ ಇರುತ್ತಾರೆ. ಪತ್ರಿಕಾ ವಿತರಕರಿಗೆ ಲಸಿಕೆಯನ್ನು ಕೊಡಿಸಲು ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಂತಹ ವಿಜಯ ಕರ್ನಾಟಕ ಪತ್ರಿಕೆಯ ಬಳಗಕ್ಕೆ ಅಭಿನಂದನೆ ತಿಳಿಸಿ ಎಲ್ಲರಿಗೂ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಿದರು.