ಬೆಂಗಳೂರು: ಸಿಎಂ ಬೊಮ್ಮಾಯಿ ಸುಳ್ಳಿನ ಸರದಾರ ಎಂದ ಕೈ ನಾಯಕ ಸುರ್ಜೆವಾಲಾ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಿರಾಶೆ ಉಂಟುಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುಳ್ಳಿನ ಸರದಾರ ಎಂದು ಕರೆದಿದ್ದು, ಜನರ ಕಣ್ಣಿಗೆ ಮಣ್ಣೆರೆಚುವ ಬಜೆಟ್ ಮಂಡಿಸಿದ್ದಾರೆ.
ರಾಜ್ಯವು ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದಲ್ಲಿ 7.9 ಶೇ ಒಟ್ಟು ಪ್ರಗತಿಯನ್ನು ದಾಖಲಿಸಿದೆ. ಸೇವಾ ವಲಯ 9.2 ಅಭಿವೃದ್ಧಿ ದಾಖಲಿಸಿದೆ. ಕೈಗಾರಿಕಾ ವಲಯ 5.1 ಪ್ರಗತಿ ಸಾಧಿಸಿದೆ ಎಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ತಿಳಿಸಿದ್ದರು.
2021 -22 ಸಾಲಿಗೆ ಹೋಲಿಸಿದಲ್ಲಿ ಈ ವರ್ಷ ತೆರಿಗೆ ಸಂಗ್ರಹವು 21 ಶೇ. ಏರಿಕೆ ಕಂಡಿದೆ. ನೇರ, ಪರೋಕ್ಷ ತೆರಿಗೆಯಲ್ಲಿ ಕೇಂದ್ರ ಸರ್ಕಾರದ ಪಾಲು 4813 ಕೋಟಿ ರೂ.ಗೆ ಏರಿಕೆ ಯಾಗಿದೆ ಎಂದು ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.