ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮೇಲೆ ಫೈರಿಂಗ್‌ ಕೇಸ್;‌ ಹಣಕಾಸಿನ ವ್ಯವಹಾರ, ವೈಯಕ್ತಿಕ ದ್ವೇಷ ಹಿನ್ನೆಲೆ ನಡೆದ ಗುಂಡಿನ ದಾಳಿ; ನಗರ ಪೊಲೀಸ್ ಆಯುಕ್ತ ಸ್ಪಷ್ಟನೆ

ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮೇಲೆ ಫೈರಿಂಗ್‌ ಕೇಸ್;‌ ಹಣಕಾಸಿನ ವ್ಯವಹಾರ, ವೈಯಕ್ತಿಕ ದ್ವೇಷ ಹಿನ್ನೆಲೆ ನಡೆದ ಗುಂಡಿನ ದಾಳಿ; ನಗರ ಪೊಲೀಸ್ ಆಯುಕ್ತ ಸ್ಪಷ್ಟನೆ

ಬೆಳಗಾವಿ: ಜಿಲ್ಲೆಯ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಹಣಕಾಸು ವಿಷಯಕ್ಕೆ ಮತ್ತು ಹಳೆಯ ವೈಷಮ್ಯಕ್ಕೆ ಆತನ ಮೇಲೆ ಫೈರಿಂಗ್ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸಿನ ವ್ಯವಹಾರ, ವೈಯಕ್ತಿಕ ದ್ವೇಷ ಹಿನ್ನೆಲೆ ಘಟನೆ ನಡೆದಿದೆ.

ನಿನ್ನೆ ಸಂಜೆ 7:30 ಸುಮಾರಿಗೆ ಹಿಂಡಲಗಾ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಸಂಗಡಿಗರು ವಾಹನದಲ್ಲಿ ಹೋಗಬೇಕಾದ್ರೆ ಫೈರಿಂಗ್ ಮಾಡಲಾಗಿತ್ತು.ದ್ವಿಚಕ್ರವಾಹನದಲ್ಲಿ ಬಂದಿದ್ದ ಮೂವರು ಫೈರಿಂಗ್ ಮಾಡಿದ್ದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಪೊಲೀಸ್ ಸಿಬ್ಬಂದಿ ಅಲರ್ಟ್ ಆಗಿ 18 ಗಂಟೆಯೊಳಗೆ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಕರಣದ ಆರೋಪಿ ಬೆಳಗಾವಿ ನಿವಾಸಿ ಅಭಿಜಿತ್ ಭಾತ್ಕಾಂಡೆ, ಬಸ್ತವಾಡ ಗ್ರಾಮದ ನಿವಾಸಿ ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾ ಬಂಧಿತರು. ಬಂಧಿತ ಅಭಿಜಿತ್ ಹಾಗೂ ರವಿ ಕೋಕಿತಕರ್ ಮಧ್ಯೆ ರಿಯಲ್ ಎಸ್ಟೇಟ್ ವ್ಯವಹಾರ ಇತ್ತು. 2020ರ ಜನವರಿ 1 ರಂದು ಆರೋಪಿ ಅಭಿಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು