ಮಾಜಿ ಸಿಎಂ ಸಿದ್ದರಾಮಯ್ಯಗೆ ಸೇಫ್ ಜಾಗ ಅಂದ್ರೆ ಪಾಕಿಸ್ತಾನ : ಬಿಜೆಪಿ ನಾಯಕ ಸಿ.ಟಿ. ರವಿ

ಹಾವೇರಿ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರದ ಕುರಿತಂತೆ ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಲೆಕ್ಕಚಾರದ ಪ್ರಕಾರ ಸಿದ್ದರಾಮಯ್ಯಗೆ ಸೇಫ್ ಅಂದ್ರೆ ಪಾಕಿಸ್ತಾನ, ಸಿದ್ದರಾಮಯ್ಯ ಮನಸ್ಥಿತಿಗೆ ಸೇಫ್ ಆಗಿರೋದು ಪಾಕಿಸ್ತಾನ, ಅಲ್ಲಿ ಮೋದಿ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಇಲ್ಲ.
ಬಿಜೆಪಿ ಸೇರಲು ಕಾಂಗ್ರೆಸ್ ನವರು ತುದಿಗಾಲಿನಲ್ಲಿ ನಿಂತಿದ್ದಾರೆ. ನಾವು ಸೆಲೆಕ್ಟ್ ಮಾಡಿ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನ ಗೆದ್ದಿತ್ತು. ಕರ್ನಾಟಕದಲ್ಲಿ ನೋಡಿ ಮಹಾಭಾರತ ಶುರುವಾಗಲಿದೆ ಎಂದರು.