ಮಾ​.12 ರಂದು ದಾವಣಗೆರೆಗೆ 'ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನʼ

ಮಾ​.12 ರಂದು ದಾವಣಗೆರೆಗೆ 'ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನʼ

ದಾವಣಗೆರೆ : ಮುಂದಿನ ವಿಧಾನ ಸಭಾ ಚುನಾವಣೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದು ಈ ನಿಟ್ಟಿನಲ್ಲಿ ಮತ್ತೆ ರಾಜ್ಯಕ್ಕೆ ಚುನಾವಣಾ ಚಾಣಕ್ಯ ಆಗಮಿಸುತ್ತಿದ್ದು, ಮಾರ್ಚ್​ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ..

ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದ್ದು. ಈ ವೇಳೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ವಸತಿ ಶಾಲೆ ಮೈದಾನದಲ್ಲಿ ನಡೆಯುವ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ಮುಂದಿನ ಚುನಾವಣೆಗೆ ಮತದಾರರನ್ನು ತಮ್ಮತ್ತ ಸೆಳೆಯಲು ಜನರಿಗೆ ಗಿಫ್ಟ್‌ಗಳನ್ನು ಘೋಷಿಸುವ ಸಾಧ್ಯತೆಯಿದೆ. ಈಗಾಗಲೇ ರಾಜ್ಯದಲ್ಲಿರಾಜ್ಯ ಬಿಜೆಪಿ ಪಕ್ಷ 4 ದಿಕ್ಕಿನಿಂದ ವಿಜಯ ಸಂಕಲ್ಪ ರಥಯಾತ್ರೆ ಆರಂಭಿಸಿದ್ದು, ಮುಂದಿನ ಚುನಾವಣೆಗೆ ರಣತಂತ್ರ ರೂಪಿಸುತ್ತಿದೆ. ಮಾರ್ಚ್​ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸು ನಿಟ್ಟಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಯಿದೆ, ನಗರದಾದ್ಯಂತ ಹೆಚ್ಚಿನ ಪೊಲೀಸ್‌ ಬಿಗಿ ಬಂದೋಬಸ್ತ್‌ ಇರಲಿದೆ.