ಮೃತ ಶಿಕ್ಷಕನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ ಅವರ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಇಂದು ಮಾಜಿ ಸಿಎಂ ಸಿದ್ದರಾಮಯ್ಯಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕ, ಬಾದಾಮಿ ವಿಧಾನಸಭೆ ಕ್ಷೇತ್ರದ ಪಟ್ಟದಕಲ್ಲು ನಿವಾಸಿ ಸಿದ್ದಯ್ಯ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಪರಿಹಾರವಾಗಿ 2 ಲಕ್ಷ ರೂ. ನೀಡಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಶಿಕ್ಷಕರು ಪ್ರತಿಭಟನೆ ನಡೆಸಿದ್ದು, ಬೇಸತ್ತ ಇಬ್ಬರು ಶಿಕ್ಷಕರು ಸಾವಿಗೆ ಶರಣಾಗಿದ್ದಾರೆ. ರಾಜ್ಯ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸಬೇಕು ಹಾಗೂ ಮೃತ ಶಿಕ್ಷಕರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.