ಮೋದಿ, ಅಮಿಶ್ ಶಾ ನೇತೃತ್ವದದಿಂದ ನಮಗೆ ಆನೆ ಬಲ ಸಿಕ್ಕಿದೆ; ಬಿಎಸ್ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜಕೀಯ ನಾಯಕರ ಪ್ರಚಾರದ ಭರಾಟೆ ಶುರುವಾಗಿದೆ.
ಈ ಮಧ್ಯೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಜೋರಾಗಿದೆ.
ನಗರದಲ್ಲಿ ಮಾತನಾಡಿದ ಅವರು, ನನ್ನ ಬಹಳ ವರ್ಷದ ಕನಸು ನನಸಾಗಿದೆ. ಅಭಿವೃದ್ಧಿಗೆ ಏನೆಲ್ಲ ಮಾಡಬೇಕೋ ಅದನ್ನೆಲ್ಲ ಮಾಡಿದ್ದೇನೆಂಬ ತೃಪ್ತಿ ಇದೆ. ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ. ವೀರಶೈವ ಲಿಂಗಾಯತ ಬಂಧುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತಿದ್ದೇನೆ. ನಾನೇ ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ನನಗೆ ಎಲ್ಲಾ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಬೇಕೆಂದು ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.