ರಾಜ್ಯ ಸರ್ಕಾರದಿಂದ ಗುತ್ತಿಗೆ ಆಧಾರಿತ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಸಿಹಿ ಸುದ್ದಿ ಶೇ15ರಷ್ಟು ವೇತನಜ ಹೆಚ್ಚಳ

ರಾಜ್ಯ ಸರ್ಕಾರದಿಂದ ಗುತ್ತಿಗೆ ಆಧಾರಿತ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಸಿಹಿ ಸುದ್ದಿ ಶೇ15ರಷ್ಟು ವೇತನಜ ಹೆಚ್ಚಳ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ (ಎನ್‌ಎಚ್‌ಎಂ) ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ.15ರಷ್ಟು ವೇತನ ಒಂದೆರಡು ದಿನಗಳಲ್ಲಿ ಹೆಚ್ಚಳವಾಗಲಿದೆ ಅಂತ ಇಂದು ಸದನದಲ್ಲಿ ಸಚಿವ ಸುಧಾಕರ್‌ ಅವರು ಭರವಸೆ ನೀಡಿದ್ದಾರೆ.

ಅವರು ಇಂದು ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯೆ ಪೂರ್ಣಿಮಾ ಅವರ ಪ್ರಶ್ನೆಗೆ ಉತ್ತರಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವೇತನ ಪರಿಷ್ಕರಣೆ ಸಂಬಂಧ ಚರ್ಚೆ ನಡೆಸಲಾಗಿದೆ ಅಂತ ತಿಳಿಸಿದ ಅವರು, ವೇತನ ಹೆಚ್ಚಳಕ್ಕೆ ಸಂಬಂಧಪಟ್ಟಂಥೆ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಿದೆ ಅಂಥ ತಿಳಿಸಿದರು.