ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಕರೆ ನೀಡಿದ ಶಿಕ್ಷಕರ ಸಂಘ

ಬೆಂಗಳೂರು : ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದ್ದು, ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರ ಸಂಘ ಕರೆ ನೀಡಿದೆ.
ರಾಜ್ಯ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ಸಂಜೆ ಸಿಎಂ ಸೂಚನೆ ಮೇರೆಗೆ ಸಿಎಸ್ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಮಾಹಿತಿ ನೀಡಿದ್ದಾರೆ. ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಗೈರಾಗಬೇಕು. ವಿದ್ಯಾರ್ಥಿ ವೇತನ, ಬಿಸಿಯೂಟ , ಸ್ಯಾಟ್ಸ್, ಸೇರಿದಂತೆ ಯಾವುದೇ ಆನ್ ಲೈನ್ ಕೆಲಸದಲ್ಲಿ ಭಾಗಿಯಾಗಬಾರದು ಎಂದು ಮನವಿ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರಿಗೆ ಕರೆ ನೀಡಿದೆ.
7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆ ಸರ್ಕಾರಿ ನೌಕರರ ಜೊತೆ ಮಾತುಕತೆ ನಡೆಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿ.ಎಸ್ ವಂದಿತಾ ಶರ್ಮಾ ಸಭೆ ಕರೆದಿದ್ದರು.ವಿಧಾನಸೌಧದಲ್ಲಿ ನಡೆದ ಸರ್ಕಾರಿ ನೌಕರರ ನಿಯೋಗದ ಜೊತಗಿನ ಸಭೆ ಮುಕ್ತಾಯವಾಗಿದ್ದು, ಎಸ್ ವಂದಿತಾ ಶರ್ಮಾ ಸಂಜೆವರೆಗೂ ಕಾಲಾವಕಾಶ ಕೇಳಿದ್ದಾರೆ ಎಂದು ಸಭೆ ಬಳಿಕ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇವೆ, ಅವರು ಸಂಜೆವರೆಗೂ ಕಾಲಾವಕಾಶ ಕೇಳಿದ್ದಾರೆ ಎಂದರು.ಹೀಗಾಗಿ ಸರ್ಕಾರಿ ನೌಕರರ ಮನವೊಲಿಸಲು ಸಿಎಂ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದು, ಇದೀಗ ಸಂಜೆ ಸಿಎಸ್ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಲು ನಿರ್ಧರಿಸಲಾಗಿದೆ.