ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಜನವರಿಯಲ್ಲಿ `ರೈತಶಕ್ತಿ' ಯೋಜನೆಯಡಿ ಡೀಸೆಲ್ ಸಬ್ಸಿಡಿ

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಜನವರಿಯಲ್ಲಿ `ರೈತಶಕ್ತಿ' ಯೋಜನೆಯಡಿ ಡೀಸೆಲ್ ಸಬ್ಸಿಡಿ

ಹಾವೇರಿ : ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತ ಶಕ್ತಿ ಡೀಸೆಲ್ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಮೂಲಕ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀ ಸಾಮರ್ಥ್ಯ ಯೋಜನೆಯ ಮೂಲಕ 5 ಲಕ್ಷ ಆರ್ಥಿಕ ಸಹಾಯ ನೀಡಿ ಸ್ವಯಂ ಉದ್ಯೋಗ, ಹೀಗೆ ದುಡಿಯುವ ವರ್ಗಕ್ಕೆ ಆರ್ಥಿಕ ಸಬಲೀಕರಣಗೊಳಿಸಲಾಗುವುದು. ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿಸಲಾಗುತ್ತಿದೆ ಎಂದರು.