ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ : ಮಾಜಿ ಸಿಎಂ ಬಿಎಸ್ ವೈ

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ : ಮಾಜಿ ಸಿಎಂ ಬಿಎಸ್ ವೈ

ಬೆಳಗಾವಿ : ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ, ನಿನ್ನೆ ಅಮಿತ್ ಶಾ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು.

ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಇನ್ನು ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿ.ಎಸ್. ಯಡಿಯೂರಪ್ಪ ಆಪ್ತ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯನೂ ನನ್ನ ಆಪ್ತ, ಎಲ್ಲರೂ ನನ್ನ ಆಪ್ತರೇ, ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು.

ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಸಮಗ್ರ ತನಿಖೆ ಮಾಡಿದ್ದಾರೆ ಕಾನೂನಿನ ಪ್ರಕಾರ ಲೋಕಾಯುಕ್ತ ಕ್ರಮ ಕೈಗೊಳ್ಳುತ್ತದೆ. ಸಿದ್ದರಾಮಯ್ಯ, ಕಾಂಗ್ರೆಸ್ಸಿಗರು ನಾನು ತೀರ್ಮಾನ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.